newsics.com
ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ದೆಹಲಿಯಲ್ಲಿ ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ.
ನಾಳೆ ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮ್ ಬೋಧ್ ಘಾಟ್ನಲ್ಲಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಜರುಗಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.
ಪ್ರಧಾನಿಯಾಗಿ, ವಿತ್ತ ಸಚಿವರಾಗಿ, ಆರ್ಥಿಕ ತಜ್ಞರಾಗಿ ದೇಶದ ಎಕಾನಾಮಿ ವ್ಯವಸ್ಥೆಗೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಅಪಾರ. ಹಾಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ದೆಹಲಿಯಲ್ಲಿ ಸ್ಮಾರಕಕ್ಕೆ ಜಾಗ ನೀಡಬೇಕು.
ಸ್ಮಾರಕ ನಿರ್ಮಿಸುವ ಜಾಗದಲ್ಲೇ ಅಂತ್ಯಕ್ರಿಯೆ ಮಾಡಬೇಕು. ಅಂತ್ಯಕ್ರಿಯೆ ಮಾಡುವ ಸ್ಥಳ ಸ್ಮಾರಕ ನಿರ್ಮಾಣ ಮಾಡುವಂತಿರಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸುತ್ತಾರಾ ಕಾದುನೋಡಬೇಕಿದೆ.