newsics.com
ಚಂಡೀಗಢ: ಪ್ರಯಾಣಿಕರಿದ್ದ ಖಾಸಗಿ ಬಸ್ ಸೇತುವೆಯ ಮೇಲಿಂದ ಚರಂಡಿಗೆ ಬಿದ್ದ ಪರಿಣಾಮ 8 ಜನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಬತಿಂಡಾದಲ್ಲಿ ನಡೆದಿದೆ.
ಅಪಘಾತದಲ್ಲಿ 8 ಜನ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಹವಾಮಾನ ವೈಪರೀತ್ಯವಿರುವ ಕಾರಣದಿಂದಾಗಿ ಈ ಅಪಘಾತ ಸಂಭವಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪಂಜಾಬ್‌ನ ಸರ್ದುಲ್‌ಗಢದಿಂದ ಬತಿಂಡಾಗೆ ತೆರಳುತ್ತಿತ್ತು. ಈ ವೇಳೆ ಜಿವಾನ್ ಸಿಂಗ್ ವಾಲಾ ಗ್ರಾಮದಲ್ಲಿ ಸೇತುವೆ ಮೇಲಿಂದ ಚರಂಡಿಗೆ ಬಿದ್ದಿದೆ. ಕೂಡಲೇ ಅಲ್ಲಿಯೇ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ.