newsics.com
ನವದೆಹಲಿ: ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ (ಡಿ.28) ನವದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಶನಿವಾರ ಬೆಳಗ್ಗೆ 11:45ಕ್ಜೆ ದೆಹಲಿಯ ನಿಗಮಬೋದ್ ಘಾಟ್ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವ್ಯಾಪ್ತಿಯ ಕಚೇರಿ, ಸಂಸ್ಥೆಗಳಿಗೆ ಶನಿವಾರ ಅರ್ಧ ದಿನ ರಜೆ ಘೋಷಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಅಂತ್ಯಕ್ರಿಯೆಯ ದಿನದಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ(CPSU) ಅರ್ಧ ದಿನದ ರಜೆಯನ್ನು ಆಚರಿಸಲಾಗುತ್ತದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ದೇಶದಲ್ಲಿ 7 ದಿನ ಶೋಕಾಚರಣೆ ಘೋಷಿಸಲಾಗಿದ್ದು, ಜನವರಿ 1 ರಂದು ಕೊನೆಗೊಳ್ಳಲಿದೆ. ಶೋಕದ ಭಾಗವಾಗಿ ರಾಷ್ಟ್ರೀಯವಾಗಿ ಮತ್ತು ಜಾಗತಿಕವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುತ್ತದೆ.
ಮುಂದಿನ 7 ದಿನಗಳವರೆಗೆ, ಕಾಂಗ್ರೆಸ್ ಪಕ್ಷವು ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಾ.ಮನಮೋಹನ್ ಸಿಂಗ್ ಅವರಿಗೆ ಎರಡು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು. ಕ್ಯಾಬಿನೆಟ್ ನಿರ್ಣಯದ ಪ್ರಕಾರ ಸರ್ಕಾರಿ ಗೌರವದೊಂದಿಗೆ ಶನಿವಾರ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಶನಿವಾರ ಬೆಳಗ್ಗೆ 8 ಗಂಟೆಗೆ ಸಿಂಗ್ ಅವರ ಪಾರ್ಥಿವ ಶರೀರವನ್ನು ಎಐಸಿಸಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುವುದು ಮತ್ತು ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬೆಳಗ್ಗೆ 8.30 ರಿಂದ 9.30 ರವರೆಗೆ ಶ್ರದ್ಧಾಂಜಲಿ ಸಲ್ಲಿಸಲು ಅವಕಾಶವಿದೆ ಎಂದು ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
Video viral : ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Reminiscence of Manmohan Singh ಮಿತಭಾಷಿ, ಗಂಭೀರ ಚಿಂತಕ, ಮನಮೋಹಕ ವ್ಯಕ್ತಿತ್ವದ ಮನಮೋಹನ ಸಿಂಗ್