newsics.com
ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ.
41 ವರ್ಷದ ಕ್ಯಾಂಪ್ ನಿವಾಸಿ ರಾಜಪ್ಪ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜಪ್ಪನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.