newsics.com
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಲ್ಲದೆ, ಆಸ್ಟ್ರೇಲಿಯಾ ನೆಲದಲ್ಲಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು.
ಈ ಸಾಧನೆಗೆ ಆಂಧ್ರ ಕ್ರಿಕೆಟ್ ಸಂಸ್ಥೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.
ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಭಾರತಕ್ಕೆ ನೆರವಾದರು. ಒಂದು ಹಂತದಲ್ಲಿ ಭಾರತ ಕೇವಲ 191ರನ್ ಗಳಿಗೆ ಆರು ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿ ಸಿಲುಕಿತ್ತು.
ಈ ಹಂತದಲ್ಲಿ ಬ್ಯಾಟಿಂಗ್ಗೆ ಇಳಿದ ನಿತೀಶ್ ಕುಮಾರ್ ರೆಡ್ಡಿ ನಿಧಾನವಾಗಿ ಬ್ಯಾಟಿಂಗ್ ಲಯ ಕಂಡುಕೊಂಡು ಆಸಿಸ್ ಬೌಲರ್ ಗಳ ಮೇಲೆ ಸವಾರಿ ಮಾಡಿ ಭರ್ಜರಿ ಶತಕ ಸಿಡಿಸಿದರು. ಒಟ್ಟು 176 ಎಸೆತಗಳನ್ನು ಎದುರಿಸಿದ ನಿತೀಶ್ ಕುಮಾರ್ ರೆಡ್ಡಿ 1 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 105ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
191 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್ಗೆ ಇಳಿದ ನಿತೀಶ್ ರೆಡ್ಡಿ, ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದರು. ವಾಷಿಂಗ್ಟನ್ ಸುಂದರ್ (50 ರನ್) ಅವರೊಂದಿಗೆ ಶತಕದ ಜೊತೆಯಾಟವಾಡಿದ ಅವರು, ಭಾರತವನ್ನು ಕನಿಷ್ಠ ಮೊತ್ತಕ್ಕೆ ಕುಸಿಯುವ ಆತಂಕ ಹಾಗೂ ಫಾಲೋಆನ್ ಭೀತಿಯಿಂದ ಪಾರು ಮಾಡಿದರು.
ಆತಿಥೇಯ ವೇಗಿಗಳಾದ ಮಿಚೇಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲ್ಯಾಂಡ್ ಹಾಗೂ ಸ್ಪಿನ್ನರ್ ನೇಥನ್ ಲಯನ್ ಅವರಂತಹ ವಿಶ್ವ ಶ್ರೇಷ್ಠ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದ 21 ವರ್ಷದ ಆಟಗಾರ, 176 ಎಸೆತಗಳಲ್ಲಿ 105 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ತಂಡದ ಮೊತ್ತ 9 ವಿಕೆಟ್ಗೆ 358 ರನ್ ಆಗಿದೆ. ರೆಡ್ಡಿ ಜೊತೆ ಮೊಹಮ್ಮದ್ ಸಿರಾಜ್ (2 ರನ್) ಕ್ರೀಸ್ನಲ್ಲಿದ್ದಾರೆ. ಗುರುವಾರ ಆರಂಭವಾದ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 474 ರನ್ ಗಳಿಸಿದ್ದು, ಭಾರತ ಇನಿಂಗ್ಸ್ ಹಿನ್ನಡೆ ತಪ್ಪಿಸಿಕೊಳ್ಳಲು ಇನ್ನೂ 116 ರನ್ ಗಳಿಸಬೇಕಿದೆ.
ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ 3ನೇ ಅತಿ ಕಿರಿಯ ಹಾಗೂ 8ನೇ ಕ್ರಮಾಂಕದಲ್ಲಿ ಮೂರಂಕಿ ದಾಟಿದ ಮೊದಲ ಬ್ಯಾಟರ್ ಎಂಬ ಶ್ರೇಯಕ್ಕೂ ನಿತೀಶ್ ರೆಡ್ಡಿ ಭಾಜನರಾದರು. ಇಂದಿನ ಅಜೇಯ ಶತಕದೊಂದಿಗೆ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿರುವ ನಿತೀಶ್ ರೆಡ್ಡಿ, ಸಚಿನ್ ತೆಂಡೂಲ್ಕರ್ ಹಾಗೂ ರಿಷಬ್ ಪಂತ್ ಬಳಿಕ ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
Life ends by Four persons ಮೋಕ್ಷ ಪಡೆಯಲು ಒಂದೇ ಕುಟುಂಬದ ಮೂವರು ಸೇರಿ ನಾಲ್ವರಿಂದ ಸಾಮೂಹಿಕ ಆತ್ಮಹ*ತ್ಯೆ
Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!