newsics.com
ಬೆಂಗಳೂರು: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ಮೃತ ಸಚಿನ್ ನಿವಾಸಕ್ಕೆ ಭೇಟಿ ನೀಡಲಿದೆ.
ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೀದರ್, ಕಲಬುರ್ಗಿ, ಭಾಗದ ಬಿಜೆಪಿ ಶಾಸಕರು, ಪ್ರಮುಖರು ಸಾಥ್ ನೀಡಲಿದ್ದಾರೆ. ಸಚಿನ್ ಕುಟುಂಬದವರಿಂದ ಬಿಜೆಪಿ ನಾಯಕರು ಕೆಲ ಮಾಹಿತಿ ಕಲೆಹಾಕಲಿದ್ದಾರೆ, ಇದೇ ವೇಳೆ ಸಚಿನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ವಿವಾದ ಜೋರಾಗುತ್ತಿದ್ದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ವಿರುದ್ಧ ಕೊನೆಗೂ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಹೋರಾಟಕ್ಕೆ ಮಣಿದು ರಾಜು ಕಪನೂರ್, ನಂದಕುಮಾರ್ ನಾಗಭುಜಂಗೆ ಸೇರಿ 6 ಜನರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.