newsics.com
ದಕ್ಷಿಣ ಕೊರಿಯಾ: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳ್ಳಂಬೆಳಗ್ಗೆ ವಿಮಾನವೊಂದು ಪತನಗೊಂಡ ಕನಿಷ್ಠ 85 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇಂದು ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಬ್ಯಾಂಕಾಕ್ನಿಂದ ಎಜೆಜು ಏರ್ ವಿಮಾನವು ರನ್ವೇಯಿಂದ ಹೊರಬಿದ್ದು ಬೇಲಿಗೆ ಬಡಿದಿದೆ, ಇದರ ಪರಿಣಾಮವಾಗಿ ವಿಮಾನದಲ್ಲಿದ್ದ 181 ಜನರಲ್ಲಿ 85 ಮಂದಿ ಮೃತಪಟ್ಟಿದ್ದಾರೆ.
https://twitter.com/i/status/1873174325970518084
ಅಪಘಾತಕ್ಕೀಡಾದ ವಿಮಾನ ‘ಜೆಜು ಏರ್’ ವಿಮಾನಯಾನ ಸಂಸ್ಥೆಯದ್ದು. ಅದರಲ್ಲಿ 6 ಸಿಬ್ಬಂದಿ, 175 ಪ್ರಯಾಣಿಕರಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಬದುಕುಳಿದಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. 85 ಮಂದಿ ಮೃತಪಟ್ಟಿರುವುದು ಅಧಿಕೃತವಾಗಿಲ್ಲ. ಆದರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಮಾನವು ಗೋಡೆಗೆ ಡಿಕ್ಕಿಯಾಗುತ್ತಿದ್ದಂತೆ, ಬೆಂಕಿ ಹೊತ್ತಿಕೊಳ್ಳುವ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ.
ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೋಕ್ ಅವರು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವಂತೆ ಆದೇಶಿಸಿದ್ದಾರೆ.