newsics.com
ಮುವಾನ್: ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ. ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟು ಇಬ್ಬರನ್ನು ರಕ್ಷಿಸಿದ್ದಾರೆ.
ಸಿಬ್ಬಂದಿ ಸೇರಿ 181 ಜನರಿದ್ದ ಈ ವಿಮಾನ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ ಹೊರಗೆ ಸರಿದು ಮುವಾನ್ ವಿಮಾನ ನಿಲ್ದಾಣದ ತಡೆಗೋಡೆಗೆ ಡಿಕ್ಕಿಯಾಗಿ ಸ್ಫೋಟಗೊಂಡಿತ್ತು.
ಈ ಭೀಕರ ವಿಮಾನ ಅಪಘಾತಕ್ಕೆ ಪಕ್ಷಿಗಳ ದಾಳಿ ಕಾರಣ ಎಂದು ಶಂಕಿಸಲಾಗುತ್ತಿದ್ದು, ವಿಮಾನ ಪತನಕ್ಕೂ ಮುನ್ನ ವಿಮಾನದ ಪೈಲಟ್ ವಾಯುಗೋಪುರಕ್ಕೆ ‘ಮೇಡೇ’ ತುರ್ತು ಸಂದೇಶ ರವಾನಿಸಿದ್ದ. ವಿಮಾನದ ಎಂಜಿನ್‌ಗೆ ಪಕ್ಷಿಗಳು ಡಿಕ್ಕಿಯಾಗಿ ಅದು ವಿಫಲವಾಗಿತ್ತು. ಈ ವೇಳೆ ಪೈಲಟ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ತುರ್ತು ಲ್ಯಾಂಡಿಂಗ್‌ಗೆ ಮುಂದಾಗಿದ್ದರು.
ವಾಯುಗೋಪುರದಿಂದಲೂ ಲ್ಯಾಂಡಿಂಗ್ ಅನುಮತಿ ದೊರೆತಿದ್ದಾದರೂ ಪೈಲಟ್ ಲ್ಯಾಂಡಿಂಗ್ ಗೆ ಸುಮಾರು ಮೂರು ನಿಮಿಷಗಳನ್ನು ತೆಗೆದುಕೊಂಡಿದ್ದ. ಕಾರಣ ಈ ವೇಳೆ ವಿಮಾನದ ಲ್ಯಾಂಡಿಂಗ್ ಗೇರ್ ಕೂಡ ವಿಫಲವಾದ ಹಿನ್ನಲೆಯಲ್ಲಿ ಪೈಲಟ್ ಮುವಾನ್ ವಿಮಾನವನ್ನು ಬೆಲ್ಲಿ ಲ್ಯಾಂಡಿಂಗ್ ಮಾಡಲು ಮುಂದಾಗಿದ್ದ. ಆದರೆ ಬೆಲ್ಲಿ ಲ್ಯಾಂಡಿಂಗ್ ವಿಫಲವಾಗಿ ವಿಮಾನ ನೇರವಾಗಿ ಹೋಗಿ ನಿಲ್ದಾಣದ ತಡೆಗೋಡೆಗೆ ಢಿಕ್ಕಿಯಾಗಿ ಸ್ಫೋಟಗೊಂಡಿದೆ ಎನ್ನಲಾಗಿದೆ.
ಈ ಭೀಕರ ಅಪಘಾತದಲ್ಲಿ 179 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ವಿಮಾನದಲ್ಲಿದ್ದ 181 ಜನರ ಪೈಕಿ 175 ಪ್ರಯಾಣಿಕರು ಮತ್ತು ಆರು ಮಂದಿ ವಿಮಾನ ಸಿಬ್ಬಂದಿ ಇದ್ದರು ಎನ್ನಲಾಗಿದೆ.
ದಕ್ಷಿಣ ಕೊರಿಯಾದ ಯೋನ್‌ಹಾಪ್ ಸುದ್ದಿ ಸಂಸ್ಥೆಯ ಪ್ರಕಾರ, ಜೆಜು ವಿಮಾನಯಾನ ಸಂಸ್ಥೆಗೆ ಸೇರಿದ ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂತಿರುಗುತ್ತಿದ್ದಾಗ ದಕ್ಷಿಣ ಜಿಯೋಲ್ಲಾ ಪ್ರಾಂತ್ಯದಲ್ಲಿ ಅಪಘಾತಕ್ಕೀಡಾಗಿದೆ.
electric wire:ವಿದ್ಯುತ್ ತಂತಿಗಳ ಮೇಲೆ ಬಟ್ಟೆ ಒಣಗಿಸಿದ ವ್ಯಕ್ತಿ.. ವಿಡಿಯೋ ನೋಡಿ
Health Tips: ಬಳುಕುವ ಬಳ್ಳಿಯಂತೆ ತೆಳ್ಳಗಿನ ಸೊಂಟ ಬೇಕೆಂದರೆ ಇವುಗಳಿಂದ ಮೊದಲು ದೂರವಿರಿ..!