newsics.com
MLC ಸಿ.ಟಿ. ರವಿ ಅವರು ರಾಜ್ಯಪಾಲರಿಗೆ 8 ಪುಟಗಳ ದೂರು ಸಲ್ಲಿಸಿದ್ದಾರೆ. ಪೊಲೀಸ್ ದೌರ್ಜನ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೇಕ್ ಎನ್‌ಕೌಂಟರ್ ಸಂಚು ಮತ್ತು ಅಕ್ರಮ ಬಂಧನದ ಬಗ್ಗೆಯೂ ದೂರಿನಲ್ಲಿ ವಿವರಿಸಲಾಗಿದೆ. ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ತನಗೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಸಿ.ಟಿ.ರವಿ ದೂರಿನಲ್ಲೇನಿದೆ?
ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.
ಇದೀಗ ರಾಜ್ಯಪಾಲರು ಸಿಟಿ ರವಿ ಅವರಿಂದ ದೂರು ಪಡೆದಿದ್ದು, ಡಿಜಿಪಿ ಅವರನ್ನು ಕರೆದು, ಸ್ಪಷ್ಟೀಕರಣವನ್ನು ಘಟನೆ ಸಂಬಂಧ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.