newsics.com
ಕಾರವಾರ : ನಾಲ್ವರು ಯುವತಿಯರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುರುಡೇಶ್ವರ ಬೀಚ್ನ ಕಡಲ ತೀರದಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಮಂಗಳವಾರದಿಂದ ಮುರುಡೇಶ್ವರದಲ್ಲಿ ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಗೆ ಬರುವಂಥ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆ. ಸದ್ಯಕ್ಕೆ ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ತಿಳಿಸಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಹೇಳಿಕೆ ನೀಡಿದ್ದಾರೆ.
ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧವಿತ್ತು. ಕಳೆದ 20 ದಿನಗಳಿಂದ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಈ ಹಿಂದೆ ನಾಲ್ವರು ವಿದ್ಯಾರ್ಥಿನಿಯರ ಸಾವು ಉಂಟಾದ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ, ಇದೀಗ ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.