newsics.com
ಚಿತ್ರದುರ್ಗ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಹೋರಾಟ ಮಾಡುತ್ತ ಮೇಕೆ, ಕೋಳಿ ಸಾಕಾಣಿಕೆ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವ ಚಿತ್ರದುರ್ಗದ ಮಂಗಳಮುಖಿ ಡಾ.ಅರುಂಧತಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ಕೊಡಲ್ಪಡುವ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಂಗಳಮುಖಿಯರಿಗೆ ಎರಡು ಮೇಕೆ, ಐದು ಕೋಳಿಗಳನ್ನು ಉಚಿತವಾಗಿ ನೀಡಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವಂತೆ ಪ್ರೇರೇಪಿಸುತ್ತಿರುವ ಡಾ.ಅರುಂಧತಿ ಅವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜ.೩ರಂದು ವಿಜಯಪುರದ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.