newsics.com
ಬೆಂಗಳೂರು: ರೇವ್ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಈ ವಿಚಾರವಾಗಿ ಹೇಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆಗಳನ್ನು ಆಧರಿಸಿ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಅರ್ಜಿದಾರರು ಮಾದಕ ವಸ್ತುಗಳನ್ನು ಸೇವಿಸಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೂ ವಿಚಾರಣ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿದೆ.