newsics.com
ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್‌ವೊಬ್ಬರು ಗದಗಿನ ಲಾಡ್ಜ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗಿನ ಪಲ್ಲವಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಶುಕ್ರವಾರ (ಡಿ.3) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ ಕೊಲೆ ಮಾಡಿದ್ದಾರೆ. ಸಾಲ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ಲಿ ಪ್ರಮೋಶನ್‌ನಲ್ಲಿ ಏನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ ಮೂರು ವಿಷಯಕ್ಕೆ ಸಾವು ಆಗಿರಬಹುದು ಅನುಮಾನ ಇದೆ ಎಂದಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೂಂಗೆ ಪೊಲೀಸರು ಬಿಡಲಿಲ್ಲ. ಹೀಗಾಗಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದು ಸಹೋದರ ತಿಳಿಸಿದ್ದಾರೆ.
New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು
flights delayed ದೆಹಲಿಯಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ, ರೈಲು ಸಂಚಾರ ಸ್ಥಗಿತ