newsics.com
ಬೆಂಗಳೂರು: ಆಸ್ತಿ ವಿವಾದ ಹಿನ್ನೆಲೆಯಲ್ಲಿ ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಸೇವೆಯಿಂದ ಅಮಾನತುಗೊಂಡಿದ್ದ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು.
ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಕಾಮತೃಷೆಗೆ ಬಳಸಿಕೊಂಡಿದ್ದರು.
ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದ ಈ ಘಟನೆ ಸರ್ಕಾರಕ್ಕೆ ಮುಜುಗರವನ್ನು ಉಂಟು ಮಾಡಿತ್ತು.
ರೊಮ್ಯಾನ್ಸ್‌ಗೆ ಒಪ್ಪದ ಅತ್ತಿಗೆಯನ್ನೇ ಕೊಂದು ಶವದೊಂದಿಗೇ ಆಸೆ ತೀರಿಸಿಕೊಂಡ ಮೈದುನ!
Vande Bharat sleeper coach ಗಂಟೆಗೆ 180 ಕಿ.ಮೀ ವೇಗದಲ್ಲಿ ಸಂಚರಿಸಿದ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು
Inter course in Winter ಬೆಳಗ್ಗೆ ದೈಹಿಕ ಸಂಪರ್ಕ ಮಾಡೋದ್ರಿಂದ ಹತ್ತಾರು ಪ್ರಯೋಜನ…