newsics.com
ಚೆನ್ನೈ: ಇಲ್ಲಿನ ವಿರುದುನಗರದ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭೀಕರ ಸ್ಪೋಟ ಸಂಭವಿಸಿದ್ದು, 6 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ತಮಿಳುನಾಡಿನ ವಿರುದುನಗರ ಜಿಲ್ಲೆಯ ಚತುರ್ ಬಳಿ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ದುರಮತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ 6 ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಪ್ಪಯ್ಯ ನಾಯಕನಪಟ್ಟಿಯಲ್ಲಿರುವ ಸಾಯಿನಾಥ್ ಎಂಬ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 4 ಕೊಠಡಿಗಳು ಧ್ವಂಸಗೊಂಡಿವೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವ ಮತ್ತೊಬ್ಬನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಅವರೂ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇದರಿಂದಾಗಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಘಟನೆಗೆ ಕಾರಣವಾದ ಬಗ್ಗೆ ಯಾವುದೇ ಸೂಕ್ತ ಮಾಹಿತಿ ಲಭ್ಯವಾಗಿಲ್ಲ. ಆದರೆ, ಪಟಾಕಿ ಸಿದ್ಧಪಡಿಸುವಾಗ ವಿದ್ಯುತ್ ಸೋರಿಕೆ ಅಥವಾ ಸಿಡಿಮದ್ದುಗಳ ನಡುವೆ ಘರ್ಷಣೆ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.
DYSP arrested ದೂರು ನೀಡಲು ಬಂದಾಕೆ ಜತೆ ಠಾಣೆಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ
Inter course in Winter ಬೆಳಗ್ಗೆ ದೈಹಿಕ ಸಂಪರ್ಕ ಮಾಡೋದ್ರಿಂದ ಹತ್ತಾರು ಪ್ರಯೋಜನ…