Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ
ದೇಶಪ್ರಮುಖ

R. Chidambaram passes away ನ್ಯೂಕ್ಲಿಯರ್ ವಿಜ್ಞಾನಿ ಡಾ.ಆರ್. ಚಿದಂಬರಂ ಇನ್ನಿಲ್ಲ

Share
1 Min Read
SHARE

newsics.com

ಮುಂಬೈ: ದೇಶದ ಅಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ (88) ಶನಿವಾರ ಬೆಳಗ್ಗೆ ನಿಧನರಾದರು.

ಪೋಖ್ರಾನ್‌ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ ಪರೀಕ್ಷೆಗಳಲ್ಲಿ ಚಿದಂಬರಂ ಅವರು ಪ್ರಧಾನ ಪಾತ್ರ ವಹಿಸಿದ್ದರು.

ಆಟೋಮಿಕ್ ಎನರ್ಜಿ ಕಮಿಷನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಭಾರತ ಸರ್ಕಾರಕ್ಕೆ ಪ್ರಧಾನ ವೈಜ್ಞಾನಿಕ ಸಲಹೆಗಾರರೂ ಆಗಿದ್ದರು. ಭಾರತವನ್ನು ಅಣ್ವಸ್ತ್ರ ದೇಶವನ್ನಾಗಿಸುವಲ್ಲಿ ಗಣನೀಯ ಕೊಡುಗೆ ನೀಡಿದ್ದ ಅವರು ಪದ್ಮ ವಿಭೂಷಣ ಪುರಸ್ಕಾರಕ್ಕೆ ಭಾಜನತಾಗಿದ್ದಾರೆ.

ಖ್ಯಾತ ಭೌತ ವಿಜ್ಞಾನಿ ಮತ್ತು ಭಾರತದ ಅತ್ಯಂತ ಯಶಸ್ವಿ ವಿಜ್ಞಾನಿಗಳಲ್ಲಿ ಒಬ್ಬರಾದ ಡಾ ರಾಜಗೋಪಾಲ ಚಿದಂಬರಂ ಅವರು ಜ.4ರ ಬೆಳಗ್ಗೆ 3.20ಕ್ಕೆ ನಿಧನರಾದರು ಎಂದು ಡಿಎಇ ಹೇಳಿಕೆಯಲ್ಲಿ ತಿಳಿಸಿದೆ.

1936ರಲ್ಲಿ ಜನಿಸಿದ ಚಿದಂಬರಂ, ಚೆನ್ನೈನ ಪ್ರೆಸಿಡೆನ್ಸಿ ಕಾಲೇಜ್ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದರು. ತಮ್ಮ ವೃತ್ತಿ ಬದುಕಿನಲ್ಲಿ ಚಿದಂಬರಂ ಅವರು ಅನೇಕ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಿದ್ದರು. ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ (2001- 2018), ಭಾಭಾ ಆಟೋಮಿಕ್ ಸಂಶೋಧನಾ ಕೇಂದ್ರದ ನಿರ್ದೇಶಕ (1990- 1993), ಅಣು ಶಕ್ತಿ ಆಯೋಗದ ಅಧ್ಯಕ್ಷ ಮತ್ತು ಭಾರತದ ಸರ್ಕಾರದ ಡಿಎಇ ಕಾರ್ಯದರ್ಶಿಯಾಗಿ (1993- 2000) ಸೇವೆ ಸಲ್ಲಿಸಿದ್ದರು.

1994- 95ರಲ್ಲಿ ಅಂತಾರಾಷ್ಟ್ರೀಯ ಅಣು ಶಕ್ತಿ ಸಂಸ್ಥೆ (ಐಎಇಎ) ಗವರ್ನರ್‌ಗಳ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.1974ರಲ್ಲಿ ‘ಆಪರೇಷನ್ ಸ್ಮೈಲಿಂಗ್ ಬುದ್ಧ’ ಹಾಗೂ 1998ರಲ್ಲಿ ‘ಆಪರೇಷನ್ ಶಕ್ತಿ’ಯಲ್ಲಿಯೂ ಅವರ ಪಾತ್ರ ಮಹತ್ವದ್ದಾಗಿತ್ತು

ಆರ್. ಚಿದಂಬರಂ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ. ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಅಣು ಕಾರ್ಯಕ್ರಮದ ಪ್ರಮುಖ ರೂವಾರಿಗಳಲ್ಲಿ ಒಬ್ಬರಾಗಿದ್ದರು ಎಂದು ಮೋದಿ ಸ್ಮರಿಸಿದ್ದಾರೆ.

Viral statement ಮದುವೆಯಾಗಿದ್ದರೂ ಬೇರೆ ಹುಡುಗಿ ಜತೆ ಸಂಬಂಧ ಹೊಂದಿದ್ದಕ್ಕೆ ಮನುಗೆ ಚಾಕು ಹಾಕಿದೆ: ಆರೋಪಿ ಯುವತಿ ಹೇಳಿಕೆ ವೈರಲ್

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರ ಸಾವು, ಹಲವರ ಸ್ಥಿತಿ ಚಿಂತಾಜನಕ

Supreme court ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು CBIಗೆ ರಾಜ್ಯಗಳ ಅನುಮತಿ ಬೇಕಿಲ್ಲ: ಸುಪ್ರೀಂ ಮಹತ್ವದ ತೀರ್ಪು

TAGGED:Nuclear scientist Dr. R. Chidambaram is no more
Share This Article
Facebook Twitter Copy Link Print
Previous Article ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರ ಸಾವು, ಹಲವರ ಸ್ಥಿತಿ ಚಿಂತಾಜನಕ
Next Article New virus in China ಚೀನಾದಲ್ಲಿ ಹೊಸ ವೈರಸ್: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಸೂಚನೆಯೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?