newsics.com
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಹತ್ತಿರ ಲಾರಿ ಪಲ್ಟಿಯಾಗಿ ಇರ್ವರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ.
ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ ಲಾರಿ ಪಲ್ಟಿಯಾಗಿದೆ.
ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರ ರಾಜ್ಯದವರು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದ 6 ಜನರಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಾಳುಗಳನ್ನು ಹೊನ್ನಾವರದ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.