Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೀವು ಕತ್ತಲೆಯಲ್ಲಿ ‘ಮೊಬೈಲ್’ ಬಳಸ್ತೀರಾ.?: ಎಚ್ಚರ, ಇದು ತುಂಬಾ ಡೇಂಜರ್
ಆರೋಗ್ಯಪ್ರಮುಖಲೈಫ್‌ಸ್ಟೈಲ್

ನೀವು ಕತ್ತಲೆಯಲ್ಲಿ ‘ಮೊಬೈಲ್’ ಬಳಸ್ತೀರಾ.?: ಎಚ್ಚರ, ಇದು ತುಂಬಾ ಡೇಂಜರ್

Share
2 Min Read
SHARE

newsics.com
ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯೋಮಾನದವರಲ್ಲೂ ಸಾಮಾನ್ಯವಾಗಿರುವ ಚಟ ಎಂದರೆ, ಅದು ಸೆಲ್ ಫೋನ್ ಬಳಕೆ. ಇದನ್ನು ಬಳಸುತ್ತಾ ಕುಳಿತುಕೊಂಡರೆ ಸಮಯ ಕಳೆಯುವುದೇ ತಿಳಿಯುವುದಿಲ್ಲ. ಈ ಸೆಲ್ ಫೋನ್ಗಳ ಅತಿಯಾದ ಬಳಕೆ ಚಟವಾಗಿದ್ದು, ಇದು ಅನೇಕ ಆರೋಗ್ಯ ಸಮಸ್ಯೆ ಮತ್ತು ರೋಗಕ್ಕೆ ಕೂಡ ಕಾರಣವಾಗುತ್ತಿದೆ.

ಹೌದು, ಅದರಲ್ಲೂ ಹೆಚ್ಚಿನವರು ಬೆಳಗ್ಗೆ ಎದ್ದಾಗ ಮಾಡುವ ಮೊದಲ ಕೆಲಸ ಮತ್ತು ರಾತ್ರಿ ಮಲಗುವ ಮುನ್ನ ಮಾಡುವ ಕೊನೆಯ ಕೆಲಸ ಮೊಬೈಲ್ ಫೋನ್ ಪರಿಶೀಲಿಸುವುದು. ಇಂದಿನ ಕಾಲದಲ್ಲಿ ಈ ಅಭ್ಯಾಸ ಸಾಮಾನ್ಯವಾಗಿದೆ. ಕತ್ತಲಲ್ಲಿ ಮೊಬೈಲ್ ಬಳಸುವ ಟ್ರೆಂಡ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ದಿನನಿತ್ಯದ ಕೆಲಸದ ಕೊನೆಯಲ್ಲಿ, ಮೊಬೈಲ್ ಫೋನ್ ನೋಡದಿದ್ದರೆ ಅನೇಕರಿಗೆ ನಿದ್ರೆ ಬರುವುದಿಲ್ಲ. ನಿಜವಾಗಿ ಹೇಳಬೇಕೆಂದರೆ ರಾತ್ರಿ ಕತ್ತಲಲ್ಲಿ ಮೊಬೈಲ್ ಬಳಸುವುದು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ಕಣ್ಣುಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ರಾತ್ರಿ ಮಲಗುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಸ್ಕ್ರೋಲ್ ಮಾಡುವುದು, ಇಮೇಲ್ ಪರಿಶೀಲಿಸುವುದು, ಮೊಬೈಲ್ ಫೋನ್’ನಲ್ಲಿ ವಿಡಿಯೋ ನೋಡುವುದು ಬಹುತೇಕ ಮಾಮೂಲಾಗಿದೆ. ಕತ್ತಲೆಯಲ್ಲಿ ಫೋನ್ ಬಳಸುವುದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಕತ್ತಲಲ್ಲಿ ಫೋನ್ ನೋಡುತ್ತಿರುವಾಗ ಪ್ರಖರ ಬೆಳಕು ಕಣ್ಣಿಗೆ ಬಡಿಯುತ್ತದೆ. ಇದು ಕಣ್ಣಿನ ಆರೋಗ್ಯದ ಮೇಲೆ ಮಾತ್ರವಲ್ಲ, ಮೆದುಳು ಮತ್ತು ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ.

ಫೋನ್‌’ಗಳಂತಹ ಇತರ ಡಿಜಿಟಲ್ ಸಾಧನಗಳು ಹೊರಸೂಸುವ ನೀಲಿ ಬೆಳಕು ಕಣ್ಣುಗಳ ರೆಟಿನಾದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ಕಣ್ಣಿನ ಆಯಾಸ, ಒಣ ಕಣ್ಣಿನ ಸಿಂಡ್ರೋಮ್, ದೃಷ್ಟಿ ನಷ್ಟಕ್ಕೆ ಕಾರಣವಾಗುತ್ತದೆ. ಹಾಗಾಗಿ ರಾತ್ರಿ ದೀಪಗಳಿಲ್ಲದೆ ಕತ್ತಲೆಯಲ್ಲಿ ಕುಳಿತು ಫೋನ್ ಬಳಸುವುದು ಸೂಕ್ತವಲ್ಲ.

ಕತ್ತಲೆಯಲ್ಲಿ ಮೊಬೈಲ್ ಫೋನ್‌’ಗಳನ್ನು ದೀರ್ಘಕಾಲದವರೆಗೆ ಬಳಸುವುದರಿಂದ ಕಣ್ಣು ಹಾನಿಯಾಗುವ ಸಾಧ್ಯತೆಯನ್ನ ಹೆಚ್ಚಿಸುತ್ತದೆ. ಇದಲ್ಲದೆ, ತಲೆನೋವು ಮತ್ತು ಕಣ್ಣಿನ ಕಿರಿಕಿರಿಯು ಸಹ ಸಂಭವಿಸಬಹುದು. ಇದು ಕಣ್ಣಿಗೆ ಒಳ್ಳೆಯದಲ್ಲ. ಪರಿಣಾಮವಾಗಿ, ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ.

ನಿದ್ರೆಯ ಮೇಲೆ ಪರಿಣಾಮ.!

ಫೋನ್ ಹೊರಸೂಸುವ ನೀಲಿ ಬೆಳಕು ನಿದ್ರೆಗೆ ಅಗತ್ಯವಾದ ಮೆಲಟೋನಿನ್ ಹಾರ್ಮೋನ್ ಉತ್ಪಾದನೆಯನ್ನು ಅಡ್ಡಿಪಡಿಸುತ್ತದೆ. ಇದು ನಿದ್ರೆಯ ಗುಣಮಟ್ಟವನ್ನ ಕಡಿಮೆ ಮಾಡುತ್ತದೆ. ಇದು ನಿದ್ರಾಹೀನತೆಗೆ ಕಾರಣವಾಗುತ್ತದೆ.

ಕಂಪ್ಯೂಟರ್ ಬಳಕೆದಾರರೇ ಎಚ್ಚರ.. ಸದ್ದಿಲ್ಲದೇ ಬರುವ ಸಮಸ್ಯೆಗಳು! Computer

TAGGED:Do you use a 'mobile' in the dark?: Be carefulit's very dangerous
Share This Article
Facebook Twitter Copy Link Print
Previous Article High Court verdict ಮಹಿಳೆಯ ದೇಹ ರಚನೆ ಕುರಿತು ಕಮೆಂಟ್ ಮಾಡುವುದು ಲೈಂಗಿಕ ಕಿರುಕುಳಕ್ಕೆ ಸಮಾನ: ಹೈಕೋರ್ಟ್ ತೀರ್ಪು
Next Article ಕಳ್ಳತನಕ್ಕೆ ಬಂದವನು ಮನೆಯೊಡತಿಗೆ ಕಿಸ್ ಕೊಟ್ಟು ಪರಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?