Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Couple cremated in single coffin ರಾತ್ರಿ ಮ್ಯಾರೇಜ್ ಆ್ಯನಿವರ್ಸರಿ ಪಾರ್ಟಿ, ಬೆಳಗಾಗುವಷ್ಟರಲ್ಲಿ ದಂಪತಿ ಆತ್ಮಹ*ತ್ಯೆ, ಒಂದೇ ಶವಪೆಟ್ಟಿಗೆಯಲ್ಲಿರಿಸಿ ಅಂತ್ಯಕ್ರಿಯೆ
ದೇಶಪ್ರಮುಖ

Couple cremated in single coffin ರಾತ್ರಿ ಮ್ಯಾರೇಜ್ ಆ್ಯನಿವರ್ಸರಿ ಪಾರ್ಟಿ, ಬೆಳಗಾಗುವಷ್ಟರಲ್ಲಿ ದಂಪತಿ ಆತ್ಮಹ*ತ್ಯೆ, ಒಂದೇ ಶವಪೆಟ್ಟಿಗೆಯಲ್ಲಿರಿಸಿ ಅಂತ್ಯಕ್ರಿಯೆ

Share
2 Min Read
SHARE

newsics.com

ನಾಗ್ಪುರ: ಕುಟುಂಬಸ್ಥರು ಮತ್ತು ಆಪ್ತರೊಂದಿಗೆ 26ನೇ ವಾರ್ಷಿಕೋತ್ಸವದ ಪಾರ್ಟಿ ಆಚರಿಸಿ ರಾತ್ರಿ ದಂಡ್ಯಾಮ್ಸನ್ಗುರುತಿಸಲಾಗಿದೆಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಸಾಯುವ ಮುನ್ನ ಜೋಡಿ ಕಳುಹಿಸಿದ ಸಂದೇಶದಿಂದಾಗಿ ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಜೆರಿಲ್ ಡ್ಯಾಮ್ಸನ್ ಆಸ್ಕರ್ (57) ಮತ್ತು ಆಯನ್ (46) ಎಂದು ಗುರುತಿಸಲಾಗಿದೆ. ಮಂಗಳವಾರವಷ್ಟೇ ಜೆರಿಲ್ ಮತ್ತು ಆಯನ್ ಅದ್ಧೂರಿಯಾಗಿ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈ ವೇಳೆ 26 ವರ್ಷದ ಹಿಂದೆ ಮದುವೆ ದಿನ ಧರಿಸಿದ್ದ ಬಟ್ಟೆಯನ್ನೇ ಜೆರಿಲ್ ಮತ್ತು ಆಯನ್ ಧರಿಸಿದ್ದರು.

ಜೆರಿಲ್ ಅವರ ದೇಹ ಅಡುಗೆಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಆಯನ್ ಮೃತದೇಹ ಡ್ರಾಯಿಂಗ್ ರೂಮ್‌ನಲ್ಲಿ ಸಿಕ್ಕಿದೆ. ಮೊದಲು ಆಯನ್ ಕುತ್ತಿಗೆಗೆ ಹಗ್ಗದಿಂದ ಬಿಗಿದು ಸಾಯಿಸಲಾಗಿದೆ. ನಂತರ ಶವವನ್ನು ಬಟ್ಟೆಯಿಂದ ಮುಚ್ಚಿ ಹೂಗಳಿಂದ ಅಲಂಕರಿಸಿರುವ ಜೆರಿಲ್, ಅಡುಗೆಮನೆಯಲ್ಲಿ ಸ್ಕಾರ್ಫ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜೆರಿಲ್ ಮತ್ತು ಆಯನ್ ದಂಪತಿಗೆ ಮಕ್ಕಳು ಇರಲಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂಬುದನ್ನು ದಂಪತಿ ಸ್ಪಷ್ಟಪಡಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಡೆತ್‌ನೋಟ್‌ನಲ್ಲಿ ತಿಳಿಸಿಲ್ಲ. ಇದೆಲ್ಲದರ ಜತೆ ತಮ್ಮ ಆಸ್ತಿಯ ಕುರಿತ ಉಯಿಲನ್ನು ಜೆರಿಲ್ ಮತ್ತು ಆಯನ್ ದಂಪತಿ ಹಂಚಿಕೊಂಡಿದ್ದಾರೆ. ಮಧ್ಯರಾತ್ರಿಯವರೆಗೂ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಂಡಿದ್ದ ದಂಪತಿ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಸಂಬಂಧಿಕರು ಮತ್ತು ನೆರೆಹೊರೆಯವರು ಆಘಾತಕ್ಕೆ ಒಳಗಾಗಿದ್ದಾರೆ.

ದಂಪತಿಯ ಆಸೆಯಂತೆಯೇ ಒಂದೇ ಶವಪೆಟ್ಟಿಗೆಯಲ್ಲಿ ಇಬ್ಬರನ್ನು ಮದುವೆ ಧಿರಿಸಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಕಳೆದ ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ನಡೆಸುವ ವಿಜಯ್ ಅಲಿಕ್ ಮೈಕೆಲ್ ಎಂಬುವರು ಮಾತನಾಡಿ, ಇದೇ ಮೊದಲ ಬಾರಿಗೆ ಇಬ್ಬರಿಗಾಗಿ ಒಂದೇ ಶವಪೆಟ್ಟಿಗೆ ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ. ದಂಪತಿ ಕೈ ಹಿಡಿದುಕೊಂಡೇ ತಮ್ಮ ಅಂತ್ಯಸಂಸ್ಕಾರ ಆಗಬೇಕೆಂದು ಹೇಳಿಕೊಂಡಿದ್ದರು. ಇದೀಗ ಅದೇ ರೀತಿಯಲ್ಲಿ ನೆರವೇರಿಸಲಾಗಿದೆ ಎಂದು ಸಂಬಂಧಿಕರು ಹೇಳಿ ಕಣ್ಣೀರಿಟ್ಟಿದ್ದಾರೆ.

ಹೋಟೆಲ್‌ವೊಂದರಲ್ಲಿ ಮುಖ್ಯ ಬಾಣಸಿಗರಾಗಿ ಜೆರಿಲ್ ಕೆಲಸ ಮಾಡಿಕೊಂಡಿದ್ದರು. ಕೋವಿಡ್-19 ಕಾಲಘಟ್ಟದಲ್ಲಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದರು. ಆದರೆ ಮತ್ತೆ ಕೆಲಸಕ್ಕೆ ಹಿಂದಿರುಗಿರಲಿಲ್ಲ. ಆಯನ್ ಗೃಹಿಣಿಯಾಗಿ ಮನೆಯಲ್ಲಿದ್ದರು. ಬೆಳಗ್ಗೆ 5.47ಕ್ಕೆ ಜೆರಿಲ್ ಮತ್ತು ಆಯನ್ ದಂಪತಿಯ ಪೋಸ್ಟ್ ನೋಡಿದ ಸಂಬಂಧಿಕರಿಬ್ಬರು ಎಲ್ಲರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹಾಗೆ ಸ್ಥಳೀಯ ಪೊಲೀಸರಿಗೂ ವಿಷಯ ತಿಳಿಸಿ ಜೆರಿಲ್ ನಿವಾಸಕ್ಕೆ ತೆರಳಿದಾಗ ಇಬ್ಬರ ಶವ ಪತ್ತೆಯಾಗಿದೆ.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜರಿಪಟ್ಕಾ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಅರುಣ್ ಶಿರ್ಷತ್, ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಅನುಮಾನಾಸ್ಪದ ಘಟನೆ ಕಂಡುಬಂದಿಲ್ಲ. ರಾತ್ರಿ ಪಾರ್ಟಿ ವೇಳೆ ದಂಪತಿ ತುಂಬಾ ಸಂತೋಷವಾಗಿದ್ದರು. ಇಬ್ಬರ ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡು, ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!

ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌

TAGGED:couple commits sui*cide by dawncremated in single coffinMarriage anniversary party at night
Share This Article
Facebook Twitter Copy Link Print
Previous Article Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ದಶಮಿ, 09-01-2025, ಗುರುವಾರ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?