newsics.com
ಬೆಂಗಳೂರು : ಕನ್ನಡದ ಹುಡುಗ ಮನೀಶ್ ಪಾಂಡೆ ಹಾಗೂ ಅವರ ಮಡದಿ ಆಶ್ರಿತಾ ಶೆಟ್ಟಿ ನಡುವೆ ವೈಮನಸ್ಸು ಮೂಡಿದ್ದು, ಈ ಇಬ್ಬರು ಕೂಡ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸ್ಟಾರ್ ಜೋಡಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇಬ್ಬರ ಖಾತೆಯಿಂದಲೂ ಇಬ್ಬರು ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಲಾಗಿದೆ. ಹೀಗಾಗಿ ಈ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಇಬ್ಬರು ಕೂಡ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈಗ ಹಬ್ಬಿರುವ ವದಂತಿಗೆ ಈ ಸ್ಟಾರ್ ದಂಪತಿಗಳು ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
2019 ರಲ್ಲಿ ಮದುವೆ
ಕನ್ನಡಿಗ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ 2019 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಕರ್ನಾಟಕದವರೇ ಆಗಿರುವ ಆಶ್ರಿತಾ ತಮಿಳು ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ.