newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸಂಘಟನೆಯೊಂದಿಗೆ ನಡೆಸಿದ ಸಂದಾನ ಯಶಸ್ವಿಯಾಗಿದೆ.
ಮುಷ್ಕರ ಹಿಂಪಡೆದುಕೊಳ್ಳಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಕಳೆದ 5 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಿರಂತರ ಹೋರಾಟ ನಡೆಸುತ್ತಿದ್ದರು.
15,000 ರೂ. ಮಾಸಿಕ ವೇತನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ಹೋರಾಟ ಕೈಗೊಂಡಿದ್ದು, ಇಂದು ಸಿಎಂ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ಮೂರು ತಿಂಗಳಿಂದ ಬಾಕಿ ಉಳಿಸಿಕೊಂಡ ಪ್ರೋತ್ಸಾಹ ಧನ ಮೊತ್ತ ಕೂಡಲೇ ಪಾವತಿಸಬೇಕು. ಕೆಲಸಕ್ಕೆ ತಕ್ಕಂತೆ ಪ್ರೋತ್ಸಾಹ ಧನ ನೀಡಬೇಕು ಎಂಬುದು ಸೇರಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳವಾರದಿಂದ ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿಯನ್ನು ಲೆಕ್ಕಿಸದೆ ಅಹೋರಾತ್ರಿ ಮುಷ್ಕರ ಮುಂದುವರೆಸಿದ್ದರು.