newsics.com
ಅಹಮದಾಬಾದ್ :ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಶಾಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಾಲಕಿಗೆ ಹೃದಯಾಘಾತವಾಗುವ ದೃಶ್ಯ ಶಾಲೆಯಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.
ದೃಶ್ಯದಲ್ಲಿ ಶಾಲೆಯ ಕಾರಿಡಾರ್‌ನಲ್ಲಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಿಂತಲ್ಲಿಯೇ ನಿಲ್ಲುತ್ತಾಳೆ. ಬಳಿಕ ಮತ್ತೆ ಮುಂದೆ ಹೋಗಿ ಪಕ್ಕದಲ್ಲಿದ್ದ ಬೆಂಚ್‌ನಲ್ಲಿ ಕುಳಿತುಕೊಳ್ಳುತ್ತಾಳೆ. ಸ್ವಲ್ಪ ಹೊತ್ತು ಕುಳಿತುಕೊಂಡವಳೆ ದಿಢೀರ್ ನೆಲಕ್ಕೆ ಕುಸಿಯುತ್ತಾಳೆ. ಆಗ ಅಲ್ಲೇ ನಿಂತಿದ್ದ ಶಿಕ್ಷಕಿಯರು ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ತಪಾಸಣೆಯ ಬಳಿಕ ಮೃತಪಟ್ಟಿರುವುದಾಗಿ ತಿಳಿಸಿದರು.