newsics.com
ಬೆಂಗಳೂರು : ನಟ ರಿಷಿ ಮತ್ತು ಪತ್ನಿ ಸ್ವಾತಿ ಪರಶುರಾಮನ್ ಅವರು ಚೊಚ್ಚಲ ಮಗುವನ್ನು ಬರಮಾಡಿಕೊಂಡಿದ್ದಾರೆ.
ಮೊದಲ ಮಗುವನ್ನು ಬರಮಾಡಿಕೊಂಡ ನಟ ರಿಷಿ ತಮ್ಮ ಇನ್ಸ್ಟಗ್ರಾಮ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಚಾರ ಕೇಳಿದ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ. ಪೋಸ್ಟ್ ಜೊತೆಗೆ ನಟ, ನಾವು ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳು ಅವಳೊಂದಿಗೆ ಇರಲಿ ಎಂದು ಬರೆದುಕೊಂಡಿದ್ದಾರೆ.
ನಟ ರಿಷಿ 2019ರಲ್ಲಿ ಚೆನ್ನೈನಲ್ಲಿ ತಮ್ಮ ಗೆಳತಿ ಸ್ವಾತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 5 ವರ್ಷಗಳ ಬಳಿಕ ಈಗ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಇನ್ನೂ, ಕಿರುತೆರೆಯಲ್ಲಿ ನಟನೆಯನ್ನು ಶುರು ಮಾಡಿ ಬೆಳ್ಳಿತೆರೆಗೆ ಕಾಲಿಟ್ಟ ನಟ ರಿಷಿ ನಾಯಕನಾಗಿ ನಟಿಸಿದ ಮೊದಲ ಸಿನಿಮಾದಲ್ಲೇ ಸಿನಿಪ್ರೇಮಿಗಳ ಗಮನ ಸೆಳೆದಿದ್ದರು.
ರೇಡಿಯೋ ಜಾಕಿ ಆಗಿಯೂ ಕೂಡ ಗುರುತಿಸಿಕೊಂಡಿದ್ದರು. ಇನ್ನೂ, ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರಿಗೆ ಪರಿಚಿತರಾದರು.