newsics.com
ಬೆಳಗಾವಿ: ಏಪ್ರಿಲ್, ಮೇ ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಂಗ್ರೇಶಿ, ಜಿಲ್ಲಾ ಪುನರ್ ವಿಂಗಡಣಾ ವರದಿ ಪಡೆಯುವುದು ಸೇರಿದಂತೆ ವಿವಿಧ ಕಾರಣಕ್ಕಾಗಿ ಚುನಾವಣೆ ವಿಳಂಬವಾಗಿದೆ. ಹಾಗಾಗಿ ಏಪ್ರಿಲ್, ಮೇತಿಂಗಳಲ್ಲಿ ಚುನಾವಣೆ ಬಹುತೇಕ ಖಚಿತವಾಗಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದರು.
ಸಂಬಂಧಪಟ್ಟ ಇಲಾಖೆಗೆ ಮೀಸಲಾತಿ ಪಟ್ಟಿ ನೀಡಲು ಸೂಚಿಸಲಾಗಿದೆ. ಅವುಗಳು ಸಿಕ್ಕ ತಕ್ಷಣ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣಾ ವೇಳಾ ಪಟ್ಟಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.