newsics.com
ಬೆಂಗಳೂರು: ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಕೃತ್ಯವೆಸಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ಪೋಷಕರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಆತ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದ. ಪೋಷಕರು ಇಲ್ಲದ ವೇಳೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ವೇಳೆಯಲ್ಲೇ ಮಗು ನರಳಿ ಪ್ರಾಣಬಿಟ್ಟಿದೆ ಎನ್ನಲಾಗಿದ್ದು, ವಿಷಯ ತಿಳಿದ ಸ್ಥಳೀಯರು ಕಾಮುಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.