Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!
ಮನರಂಜನೆ

ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!

Share
1 Min Read
SHARE

newsics.com

ಮುಂಬೈ: ದೀಪಿಕಾ ಪಡುಕೋಣೆ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಗ್ಲಾಮರ್‌ ಪಾತ್ರದಲ್ಲಿಯೂ, ಡಿಗ್ಲಾಮರ್‌ ಆಗಿ ಸಹಜಾಭಿನದಲ್ಲಿಯೂ ಗಮನ ಸೆಳೆಯುತ್ತಾರೆ. ಇದೇ ಕಾರಣಕ್ಕೆ ಇಂದಿಗೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ.

ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು ತಾತ್ಕಾಲಿಕವಾಗಿ ಸಿನಿಮಾ ಚಟುವಟಿಕೆಯಿಂದ ದೂರ ಸರಿಯಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ಪ್ರತಿ ಚಿತ್ರಕ್ಕೆ 15-30 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎಂದು ವರದಿ ತಿಳಿಸಿದೆ.

ಎರಡನೇ ಸ್ಥಾನದಲ್ಲಿ ನಟಿ, ರಾಜಕಾರಣಿ ಕಂಗನಾ ರಾಣಾವತ್‌ ಇದ್ದಾರೆ. 4 ಬಾರಿಯ ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ಪ್ರತಿ ಸಿನಿಮಾಕ್ಕೆ 15-27 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ.

ಮೂರನೇ ಸ್ಥಾನದಲ್ಲಿರುವ ಪ್ರಿಯಾಂಕಾ ಚೋಪ್ರಾ ಜೋನಸ್‌ 15-25 ಕೋಟಿ ರೂ. ಸಂಭಾವನೆ ಹೊಂದಿದ್ದಾರೆ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕತ್ರಿನಾ ಕೈಫ್‌ (15-25 ಕೋಟಿ ರೂ.), ಆಲಿಯಾ ಭಟ್‌ (15-20 ಕೋಟಿ ರೂ.), ಕರೀನಾ ಕಪೂರ್‌ ಖಾನ್‌ (8-18 ಕೋಟಿ ರೂ.), ಶ್ರದ್ಧಾ ಕಪೂರ್‌ (7- 15 ಕೋಟಿ ರೂ.), ವಿದ್ಯಾ ಬಾಲನ್‌ (8-14 ಕೋಟಿ ರೂ.) ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಈ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ ಮತ್ತು ಐಶ್ವರ್ಯಾ ರೈ ಬಚ್ಚನ್‌ ಹೆಸರೂ ಇದೆ. ಅನುಷ್ಕಾ ಶರ್ಮಾ ಪ್ರತಿ ಚಿತ್ರಕ್ಕೆ 8-12 ಕೋಟಿ ರೂ.ಗೆ ಬೇಡಿಕೆ ಇಟ್ಟರೆ, ಐಶ್ವರ್ಯಾ ರೈ ಬಚ್ಚನ್‌ ಸಂಭಾವನೆ 10 ಕೋಟಿ ರೂ. ಎನ್ನಲಾಗಿದೆ. ವಿಶೇಷ ಎಂದರೆ ಟಾಪ್‌ 10 ಪಟ್ಟಿಯಲ್ಲಿ ದಕ್ಷಿಣ ಭಾರತ ಚಿತ್ರರಂಗದ ಯಾವೊಬ್ಬ ನಟಿಯ ಹೆಸರೂ ಇಲ್ಲ.

TAGGED:#Highest #Paid #Actresses #Kangana Ranaut #Deepika Padukone #Priyanka Chopra #entertainment #newsics
Share This Article
Facebook Twitter Copy Link Print
Previous Article ಮನೆಯಲ್ಲಿ ಜಿರಳೆಗಳ ಹಾವಳಿ ಇದೆಯೇ? ಈ ಸಿಂಪಲ್‌ ಟ್ರಿಕ್ಸ್‌ ಟ್ರೈ ಮಾಡಿ ನೋಡಿ
Next Article ಕೊಲೆ ಆರೋಪಿ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್‌! ಲೋ ಬಿಪಿ ಕಾರಣ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?