newsics.com
ಆನೇಕಲ್: ಬಯೋಇನ್ನೊವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಷನ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.