Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BIOINNOVATION CENTRE FIRE: ಬಯೋ ಇನೋವೇಷನ್ ಸೆಂಟರ್‌ಗೆ 150 ಕೋಟಿಗೂ ಹೆಚ್ಚು ನಷ್ಟ
ಕರ್ನಾಟಕ

BIOINNOVATION CENTRE FIRE: ಬಯೋ ಇನೋವೇಷನ್ ಸೆಂಟರ್‌ಗೆ 150 ಕೋಟಿಗೂ ಹೆಚ್ಚು ನಷ್ಟ

Share
1 Min Read
SHARE

newsics.com

ಬೆಂಗಳೂರು: ಐಟಿ-ಬಿಟಿ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯ ಬಿಹೆಚ್‌ಎಲ್ ಜಂಕ್ಷನ್ ಸಮೀಪದಲ್ಲಿರುವ ಬಿಬಿಸಿಯಲ್ಲಿ ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಸೆಂಟರ್‌ನಲ್ಲಿ ಯಾರೂ ಇರದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದರು.

ಬಿಬಿಸಿಯ ಸೆಂಟರ್‌ನಲ್ಲಿ ಸುಮಾರು 12 ಸಂಶೋಧನಾ ಪ್ರಯೋಗಾಲಯಗಳಿದ್ದು, ಇಲ್ಲಿ ಜೀವ ವಿಜ್ಞಾನ, ಆರೋಗ್ಯ, ಔಷಧಿ, ಜೈವಿಕ ಔಷಧಿ, ಕೃಷಿ, ಆಹಾರ, ಕೈಗಾರಿಕಾ ಜೈವಿಕ ತಂತ್ರಜ್ಞಾನ, ಜೈವಿಕ ಪರಿಸರ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಶೋಧನೆಗಳು ನಡೆಯುತ್ತವೆ. ಹೀಗಾಗಿ ಪ್ರಯೋಗಾಲಯಗಳಲ್ಲಿ ವಿವಿಧ ರಾಸಾಯನಿಕ ದ್ರಾವಣ, ವಸ್ತುಗಳು, ಉಪಕರಣಗಳು, ಮಾದರಿಗಳು ಹೆಚ್ಚಿನ ಪ್ರಮಾಣದಲ್ಲಿದ್ದವು. ಆದುದರಿಂದ ಸಮಯ ಕಳೆದಂತೆ ಕಟ್ಟಡದಲ್ಲಿ ಬೆಂಕಿಯ ಪ್ರಮಾಣ ಹೆಚ್ಚಾಗಿದೆ. ಆರಂಭದಲ್ಲಿ ಬೆಂಕಿ ತಹಬದಿಗೆ ತರುವುದು ಕಷ್ಟವಾದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡು ಸತತ ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಗಿದೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದರು. ಅಂದಾಜು 150 ಕೋಟಿ ರೂ. ಅಧಿಕ ಮೌಲ್ಯದ ವಸ್ತುಗಳು ನಾಶವಾಗಿದೆ ಎಂದು ಹೇಳಲಾಗಿದೆ.

Share This Article
Facebook Twitter Copy Link Print
Previous Article ಅಗಸೆ ಬೀಜಗಳು ಇವರಿಗೆ ಒಳ್ಳೆಯದಲ್ಲ.. ತಿನ್ನಲೇಬೇಡಿ..! Flax Seeds
Next Article ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?