Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Info… ರಾಜ್ಯದ ಮಕ್ಕಳಲ್ಲಿ ಶೀತ,‌ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?
ಆರೋಗ್ಯಕರ್ನಾಟಕಪ್ರಮುಖ

Health Info… ರಾಜ್ಯದ ಮಕ್ಕಳಲ್ಲಿ ಶೀತ,‌ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?

Share
2 Min Read
SHARE

newsics.com

ಬೆಂಗಳೂರು: ಚಳಿಗಾಲ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಚಿಕ್ಕ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಉಬ್ಬಸ ಸಮಸ್ಯೆ ಗಣನೀಯವಾಗಿ ಏರಿಕೆ ಹೆಚ್ಚುತ್ತಿದೆ.

ಮೂರರಿಂದ ಆರು ತಿಂಗಳೊಳಗಿನ ಮಕ್ಕಳಲ್ಲೂ ಶ್ವಾಸಕೋಶ ಸಂಬಂಧಿತ ಮತ್ತು ಬ್ರಾಂಕೈಟಿಸ್‌ ಸಮಸ್ಯೆಯು ಕಾಣಿಸಿಕೊಳ್ಳುತ್ತಿದೆ. ಇದೊಂದು ಅಸಹಜ ಸಂದರ್ಭ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಹವಾಮಾನದಲ್ಲಿ ಏರುಪೇರು ಹೆಚ್ಚಾಗಿರುವುದರಿಂದ ಮಕ್ಕಳಿಗೆ ಅತ್ಯಂತ ಕಡಿಮೆ ಸಮಯದಲ್ಲಿ ವೈರಲ್‌ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳಲ್ಲಿ ಉಬ್ಬಸ, ಅಸ್ತಮಾ, ಶ್ವಾಸಕೋಶ ಸಂಬಂಧಿತ ಮತ್ತು ಇತರೆ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.

ಈ ರೀತಿಯ ಸಮಸ್ಯೆ ಹೆಚ್ಚಾಗಿ 3ರಿಂದ 6 ತಿಂಗಳ ವಯಸ್ಸಿನ ಶಿಶುಗಳಲ್ಲೂ ಕಂಡುಬರುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ಸಮಸ್ಯೆಯಿಂದ ದೂರವಿರಲು ಪೋಷಕರು ಆದಷ್ಟು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗದಿರುವುದು ಒಳಿತು. ಮನೆಯಲ್ಲಿ ಮಕ್ಕಳಿರುವ ಪೋಷಕರು ಹೊರಗಡೆ ಹೋಗುವಾಗ ಮಾಸ್ಕ್‌ ಧರಿಸುವ ಮೂಲಕ ಎಚ್ಚರಿಕೆವಹಿಸಬೇಕಾದ ಅನಿವಾರ್ಯತೆ ಇದೆ ಎಂಬುದು ಮಕ್ಕಳ ತಜ್ಞ ಡಾ. ಅಶೋಕ್‌ ಎಂ.ವಿ. ಅವರ ಅಭಿಪ್ರಾಯ.

ಚಿಕ್ಕ ಮಕ್ಕಳಲ್ಲಿ ಬ್ರಾಂಕೈಟಿಸ್‌ ಸಮಸ್ಯೆ ಕಂಡುಬರುವುದು ಸಾಮಾನ್ಯ. ಬಹುತೇಕ ಮಕ್ಕಳಲ್ಲಿ ವೈರಲ್‌ ಸೋಂಕಿನಿಂದ ಅಥವಾ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಹರಡುವ ಮೂಲಕ ಮತ್ತು ಈಗಾಗಲೆ ಈ ಸೋಂಕಿಗೆ ತುತ್ತಾದ ಮಕ್ಕಳಲ್ಲೂ ಈ ಸಮಸ್ಯೆ ಕಂಡುಬರುತ್ತದೆ. ಕುಟುಂಬದಲ್ಲಿ ಯಾರಾದರು ಅಸ್ತಮಾ ಹೊಂದಿದ್ದರೂ ಕೂಡ ಮಕ್ಕಳು ಬಹು ಬೇಗ ಈ ಸಮಸ್ಯೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಧೂಳು ಮತ್ತು ವೈರಲ್‌ ಸೋಂಕುಗಳಿಂದಲೂ ಮಕ್ಕಳಲ್ಲಿ ಅಸ್ತಮಾ ಕಂಡುಬರಬಹುದು. ಹಾಗಾಗಿ ಪೋಷಕರು ನಿಗದಿತ ಸಮಯದಲ್ಲಿ ವ್ಯಾಕ್ಸಿನ್‌ ಹಾಕಿಸುವ ಮೂಲಕ ಮಕ್ಕಳ ಬಗ್ಗೆ ಹೆಚ್ಚು ಜಾಗೃತಿ ವಹಿಸಿ.
ಸಾಮಾನ್ಯವಾಗಿ ಈ ರೀತಿಯ ಸಮಸ್ಯೆ ಎದುರಾದಾಗ ಮಕ್ಕಳಿಗೆ ನೆಬ್ಯುಲೈಸೇಶನ್‌ ಮತ್ತು ದೊಡ್ಡ ಮಕ್ಕಳಿಗೆ ಕೆಮ್ಮಿನ ಔಷಧ ನೀಡಲಾಗುತ್ತದೆ. ಒಂದು ವೇಳೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದಿದ್ದಲ್ಲಿ ಹೈಪೋಕ್ಸಿಯಾಗೆ ಕಾರಣವಾಗಬಹುದು. ದೇಹದಲ್ಲಿ ಕಡಿಮೆ ಆಮ್ಲಜನಕದ ಪರಿಣಾಮ ನ್ಯುಮೋನಿಯಾಗೆ ತಿರುಗಬಹುದು. ದೇಹದಲ್ಲಿ ಆಮ್ಲಜನಕವು ಕಡಿಮೆಯಾದಂತೆ ಆರೋಗ್ಯವು ತೀರಾ ಹದಗೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳನ್ನು ಹೊರಗಿನ ವಾತಾವರಣಕ್ಕೆ ಒಡ್ಡುವುದನ್ನು ಆದಷ್ಟು ಮಿತಿಗೊಳಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟಿ. ಒಂದು ವೇಳೆ ಮಗು ಅತಿಯಾದ ಜ್ವರ, ಶೀತ, ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅಗಸೆ ಬೀಜಗಳು ಇವರಿಗೆ ಒಳ್ಳೆಯದಲ್ಲ.. ತಿನ್ನಲೇಬೇಡಿ..! Flax Seeds

ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips

TAGGED:coughIncrease in coldrespiratory problems among children of the state: what is the advice of experts?
Share This Article
Facebook Twitter Copy Link Print
Previous Article ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ – ELECTRICITY SUPPLY
Next Article Actor Saif Ali Khan stabbed ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?