newsics.com
ಬೀದರ್: ನಗರದ ಶಿವಾಜಿ ಚೌಕ್ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುಷ್ಕರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.
ಜನನಿಬಿಡ ಶಿವಾಜಿ ಚೌಕ್ನಲ್ಲಿ ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಬೀದರ್ನ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬೀಸಿದ್ದಾರೆ.
ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಕಲ್ಲು ತೂರಿ, ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ.
ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 83 ಲಕ್ಷ ರೂ. ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.
ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ
Pregnant mountain! ಗರ್ಭಿಣಿಯಾಗಬಯಸುವ ಮಹಿಳೆಯರು ಈ ಪರ್ವತಕ್ಕೆ ಬರ್ತಾರೆ! ಏನಿದರ ಮಹತ್ವ?
Sanjith Hegde v/s Manju ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಮಂಜು ಗರಂ ಆಗಿದ್ದೇಕೆ?