newsics.com
ಬೆಂಗಳೂರು: ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.
ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಲಾಗಿದೆ.
ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಗರಂ ಆಗಿದ್ದಾರೆ.
ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ.
ದರ ಹೆಚ್ಚಳ ಸಂಬಂಧ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್ಡೇಟ್ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.
ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ.
Prajwal Revanna case ಅಶ್ಲೀಲಕ್ಕೂ ಮಿತಿಯಿರಬೇಕು, ಇದು ಎಲ್ಲವನ್ನೂ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ
Air hostess fired ತರಬೇತಿ ಮುಗಿಸಿದ ಖುಷಿಗೆ ವಿಮಾನದಲ್ಲಿ ವಿಡಿಯೋ ಮಾಡಿದ ಗಗನಸಖಿ ವಜಾ! ವೈರಲ್ ವಿಡಿಯೊ ನೋಡಿ