newsics.com
ಚಡೀಗಢ: ಭೀಕರ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್ ಸಂಬಂಧಿಗಳಿಬ್ಬರು ಮೃತಪಟ್ಟಿರುವ ಘಟನೆ ಹರ್ಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮನುಭಾಕರ್ ಅವರ ಚಿಕ್ಕಪ ಹಾಗೂ ಅಜ್ಜಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಿಕ್ಕಪ್ಪ ಯುದ್ಧ್‌ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಂಗ್ ಸೈಡ್‌ನಿಂದ ವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮನು ಭಾಕರ್ ಅವರ ಚಿಕ್ಕಪ್ಪ, ಅಜ್ಜಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಪೊಲೀಸರು ಈ ಕುರಿತು ಹಿಟ್ & ರನ್ ಪ್ರಕರಣ ದಾಖಲಿಸಿಕೊಂಡು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.