Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್
ಕರ್ನಾಟಕಪ್ರಮುಖ

Indian Gray Wolf ಬಂಕಾಪುರ ತೋಳಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ಇಂಡಿಯನ್ ಗ್ರೇ ಉಲ್ಫ್

Share
1 Min Read
SHARE

newsics.com

ಗಂಗಾವತಿ(ಕೊಪ್ಪಳ): ಕನಕಗಿರಿ ತಾಲೂಕಿನ ಬಂಕಾಪುರದ ತೋಳಧಾಮದಲ್ಲಿ ಅಪರೂಪದ ಇಂಡಿಯನ್ ಗ್ರೇ ಉಲ್ಫ್ ಎಂಟು ಮರಿಗಳಿಗೆ ಜನ್ಮ ನೀಡಿದ್ದು, ಎಲ್ಲ ಮರಿಗಳೂ ಸುರಕ್ಷಿತವಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕನಕಗಿರಿ ತಾಲ್ಲೂಕಿನ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ. ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟೇರ್ ಪ್ರದೇಶದಲ್ಲಿರುವ ಬಂಕಾಪುರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದೆ.

ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ. ಇಂಡಿಯನ್ ಗ್ರೇ ವೂಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ ಒಂದು ತೋಳವು 8 ಮರಿಗಳಿಗೆ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಬಂಕಾಪುರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಕನಕಗಿರಿ ತಾಲೂಕಿನ ಬಂಕಾಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಈ ತೋಳ ಧಾಮದಲ್ಲಿ ಸಫಾರಿ ನಡೆಸುವ ಚಿಂತನೆ ಇದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ, ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದೆ. ಗಂಗಾವತಿ ನಗರದಿಂದ 15 ಕಿ.ಮೀ. ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ

ಸ್ಟಾರ್ ಆಟಗಾರನ ವಿರುದ್ಧ ಬಂಧನ ವಾರಂಟ್ ಜಾರಿ…check bounce case

Paragliding: ಗೋವಾದಲ್ಲಿ ಪ್ಯಾರಾಗ್ಲೈಡಿಂಗ್‌ ವೇಳೆ ಇಬ್ಬರು ಸಾವು

TAGGED:Indian Gray Wolf gave birth to 8 cubs at Bankapur Wolf Sanctuary
Share This Article
Facebook Twitter Copy Link Print
Previous Article Paragliding: ಗೋವಾದಲ್ಲಿ ಪ್ಯಾರಾಗ್ಲೈಡಿಂಗ್‌ ವೇಳೆ ಇಬ್ಬರು ಸಾವು
Next Article Neeraj Chopra marriage ಹಿಮಾನಿ ಜತೆ ದಾಂಪತ್ಯ ಜೀವನ ಪ್ರವೇಶಿಸಿದ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?