Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ
ಕರ್ನಾಟಕಪ್ರಮುಖ

Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎನ್ನಲಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡುಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ.

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯಿಸಿದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ, ಸಿಎಂ ಪ್ರಭಾವ ಇಲ್ಲದೆ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಮುಡಾ ಹಗರಣ ಸಂಬಂಧ ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಈ‌ ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

ಅದಕ್ಕೂ ಮೊದಲು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ.

Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!

ಸ್ನೇಹಿತನ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು; ಸುದ್ದಿಗೋಷ್ಠಿ ಕರೆದ ಜನಾರ್ಧನ ರೆಡ್ಡಿ

KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

TAGGED:Muda scam: Clean chit for CM Siddu couple in Loka probereport submitted on Monday
Share This Article
Facebook Twitter Copy Link Print
Previous Article Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!
Next Article Gas leak in gas bunk ಗ್ಯಾಸ್ ಬಂಕ್ ನಲ್ಲಿ ಅನಿಲ ಸೋರಿಕೆ: ಸ್ಥಳೀಯರ ಆರೋಗ್ಯದಲ್ಲಿ ಏರುಪೇರು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?