newsics.com
ಬೆಂಗಳೂರು: ಅತ್ಯಾಪ್ತ ಗೆಳೆಯರಾಗಿದ್ದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವಿ ಬಿರುಕು ಕಾಣಿಸಿಕೊಂಡಿದೆ. ಒಟ್ಟಿಗೆ ಸೇರಿಕೊಂಡೇ ಎದುರಾಳಿಗಳನ್ನು ಮಟ್ಟ ಹಾಕುತ್ತಿದ್ದ ದೋಸ್ತಿಯಲ್ಲಿ ಕಲಹ ಉಂಟಾಗಿದ್ದು, ಇದೀಗ ಪರಸ್ಪರ ಬಹಿರಂಗವಾಗಿಯೇ ಕಿತ್ತಾಟಕ್ಕಿಳಿದಿದ್ದಾರೆ.
ನನ್ನನ್ನು ರಾಜಕೀಯವಾಗಿ ತುಳಿಯಲು ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿ ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜನಾರ್ದನ ರೆಡ್ಡಿ ಸಹ ಪತ್ರಿಕಾಗೋಷ್ಠಿ ನಡೆಸಿ ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹೀಗೆ ಹಳೇ ದೋಸ್ತಿಗಳ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪ ಜೋರಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಧ್ಯ ಪ್ರವೇಶ ಮಾಡಿದ್ದು, ಶ್ರೀರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ.
ಸಂಡೂರು ಉಪಚುನಾವಣೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಉಸ್ತುವಾರಿ ರಾಧಾ ಮೋಹನ್ ದಾಸ್ ಹಾಗೂ ಶ್ರೀರಾಮುಲು ನಡುವೆ ಮಾತಿನ ಜಟಾಪಟಿ ನಡೆದಿದ್ದು, ಈ ವೇಳೆ ಶ್ರೀರಾಮುಲು ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಇದರಿಂದ ಅಲರ್ಟ್ ಆಗಿರುವ ಜೆಪಿ ನಡ್ಡಾ ಶ್ರೀರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ. ಇಂದು (ಜನವರಿ 23) ಜೆಪಿ ನಡ್ಡಾ ಅವರು ಶ್ರೀರಾಮುಲು ಅವರಿಗೆ ದೂರವಾಣಿ ಕರೆ ಮಾಡಿ ದೆಹಲಿಗೆ ಬನ್ನಿ ಕೂತು ಮಾತಾಡೋಣ ಎಂದು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಶ್ರೀರಾಮುಲು, ಕೋರ್ ಕಮಿಟಿ ಸಭೆಯಲ್ಲಿ ತಮಗಾದ ಅವಮಾನದ ಬಗ್ಗೆ ಜೆಪಿ ನಡ್ಡಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ