newsics.com
ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 7 ಆರೋಪಿಗಳ ವಿರುದ್ಧ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಜಾಮೀನು ರದ್ದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ವಿಚಾರಣೆ ಆರಂಭವಾದಾಗ ಹೈ ಕೋರ್ಟ್ ಜಾಮೀನು ನೀಡಿದೆ. ಹಾಗಾಗಿ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರದ ಪರ ವಕೀಲರಿಂದ ಕೋರ್ಟ್ ಗೆ ಮನವಿ ಮಾಡಲಾಯಿತು. ಈ ವೇಳೆ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳಾದ ಪವಿತ್ರಾ ಗೌಡ, ಜಗದೀಶ್, ಅನುಕುಮಾರ್, ನಾಗರಾಜ, ಎಂ ಲಕ್ಷ್ಮಣ್, ಪ್ರದೋಶ್‌ಘ ನೀಡಿರುವ ಜಾಮೀನನ್ನು ಏಕೆ ರದ್ದು ಮಾಡಬೇಕು ಎಂದು 7 ಕಾರಣಗಳನ್ನು ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Premature Childbirth ಅಮೆರಿಕ ಪೌರತ್ವಕ್ಕಾಗಿ ಭಾರತೀಯರ ಹರಸಾಹಸ: ಅವಧಿಪೂರ್ವ ಹೆರಿಗೆಗೆ ನಿರ್ಧಾರ
Shooting permission ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಖಂಡ್ರೆ ಆದೇಶ