newsics.com
ಭಂಡಾರಾ(ಮಹಾರಾಷ್ಟ್ರ): ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.
ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಫಡ್ನವಿಸ್, ಘಟನಾ ಸ್ಥಳದಿಂದ ಐವರನ್ನು ರಕ್ಷಿಸಲಾಗಿದೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದಾರೆ ಎಂದಿದ್ದಾರೆ.
ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ.
ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಅತ್ಯಾಚಾರಕ್ಕೊಳಗಾದ ಈ ಯುವತಿ ತನ್ನ ಗುಪ್ತಾಂಗದಲ್ಲಿ ಬ್ಲೇಡ್ ಇರಿಸಿಕೊಂಡಿದ್ದೇಕೆ?
Supreme notice to Darshan ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್