newsics.com
ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿ ಐಟಿ ಅಧಿಕಾರಿಗಳು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಉದ್ಯಮಿಗಳಾದ ವಿನೋದ್ ದೊಡ್ಡಣ್ಣವನರ್ , ಪುರುಷೋತ್ತಮ ದೊಡ್ಡಣ್ಣವನರ್ ಸೇರಿ ಹಲವು ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಗೋವಾದಿಂದ ಆಗಮಿಸಿದ್ದ ಐಟಿ ಅಧಿಕಾರಿಗಳ 5 ತಂಡ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ಮಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.