newsics.com
ಬಾಘ್ಪತ್(ಉತ್ತರ ಪ್ರದೇಶ): ಇಲ್ಲಿ ಮಂಗಳವಾರ ನಡೆಯುತ್ತಿದ್ದ ಲಡ್ಡು ಪರ್ವ್‌ನ ವೇದಿಕೆ ಕುಸಿದು ಕನಿಷ್ಟ ಏಳು ಮಂದಿ ಮೃತಪಟ್ಟು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಜೈನ ಧರ್ಮದ ಮೊದಲ ತೀರ್ಥಂಕರರಾದ ಭಗವಾನ್ ಆದಿನಾಥ್ ಅವರ ‘ನಿರ್ವಾಣ ಲಡ್ಡು ಪರ್ವ್’ ನಲ್ಲಿ ಮಂಗಳವಾರ ತಾತ್ಕಾಲಿಕ ವೇದಿಕೆ ಕುಸಿದು ನಂತರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಜೈನ ಶಿಷ್ಯರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾತ್ಕಾಲಿಕ ವೇದಿಕೆಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಗೊಂಡವರಿಗೆ ತಕ್ಷಣದ ಪರಿಹಾರ ನೀಡುವಂತೆ ಸ್ಥಳೀಯ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
https://twitter.com/i/status/1884105574352339125
https://x.com/ANINewsUP/status/1884088306729902213?t=Tmz7md7qHH4O8UqKyCpa5w&s=19