newsics.com
ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ ನಿಮಿತ್ತ ಫೆಬ್ರವರಿ 5 ರಿಂದ ಫೆಬ್ರವರಿ 14, 2025 ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.
ಹೌದು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ.