ನವದೆಹಲಿ: ಕೇಂದ್ರ ಸರ್ಕಾರವು ಬೆಂಬಲ ಬೆಲೆ ಏರಿಕೆ ಮಾಡಿರುವುದರಿಂದ ದೇಶದ ರೈತರು ಸುಮಾರು 2 ಲಕ್ಷ ಕೋಟಿ ರೂಪಾಯಿಯನ್ನು ಕನಿಷ್ಠ ಬೆಂಬಲ ಬೆಲೆಯನ್ನಾಗಿ ಪಡೆಯಲಿದ್ದಾರೆ.
ಕಳೆದ ವರ್ಷಕ್ಕಿಂತ ಈ ಬಾರಿ 35 ಸಾವಿರ ಕೋಟಿ ರೂಪಾಯಿಯನ್ನು ಎಂಎಸ್‌ಪಿಯಾಗಿ ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದರು.
ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನ್ವಯ 9.26 ಕೋಟಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ವರ್ಗಾವಣೆ, ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ ಸೇರಿ ಹಲವು ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಭತ್ತ, ಸೂರ್ಯಕಾಂತಿ, ಜೋಳ ಸೇರಿ 14 ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯು ಬುಧವಾರ (ಜೂನ್ 19) ಅನುಮೋದನೆ ನೀಡಿದೆ.
ನರೇಂದ್ರ ಮೋದಿ ಅವರ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗದೆ. ಹಾಗಾಗಿ, ಭತ್ತ ಸೇರಿ 14 ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಭತ್ತಕ್ಕೆ ನೀಡುವ ಎಂಎಸ್‌ಪಿಯನ್ನು 117 ರೂ. ಏರಿಕೆ ಮಾಡಲಾಗಿದ್ದು, ಇದರೊಂದಿಗೆ ಒಟ್ಟು ಎಂಎಸ್‌ಪಿ 2,300 ರೂ. ಆಗಿದೆ” ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರ