newsics.com
ಲಕ್ನೋ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಸಾವು ಕಂಡ ಹಿನ್ನೆಲೆ ಇಂದು ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ.
ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ.
ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಯೋಗಿ ಖುದ್ದು ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.