Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Aircraft tragedy ವಿಮಾನ ದುರಂತ: ಎಲ್ಲ 67 ಮಂದಿ ಸಾವು, ದುರಂತಕ್ಕೆ ಕಾರಣ ಇನ್ನೂ ನಿಗೂಢ
ಪ್ರಮುಖವಿದೇಶ

Aircraft tragedy ವಿಮಾನ ದುರಂತ: ಎಲ್ಲ 67 ಮಂದಿ ಸಾವು, ದುರಂತಕ್ಕೆ ಕಾರಣ ಇನ್ನೂ ನಿಗೂಢ

Share
1 Min Read
SHARE

newsics.com

ಅಮೆರಿಕ: ವಾಷಿಂಗ್ಟನ್ ಡಿಸಿ ಸಮೀಪ ನಡೆದಿದ್ದ ಅಮೆರಿಕನ್ ಏರ್ ಲೈನ್ಸ್‌ ವಿಮಾನ ಮತ್ತು ಸೇನಾ ಹೆಲಿಕಾಪ್ಟರ್ ನಡುವಿನ ಅಪಘಾತದಲ್ಲಿ ಎಲ್ಲಾ 67 ಮಂದಿ ಮೃತಪಟ್ಟಿದ್ದಾರೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಬಳಿಕ ಎರಡೂ ವಿಮಾನಗಳು ಪೊಟೊಮ್ಯಾಕ್ ನದಿಗೆ ಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ. ಈವರೆಗೆ 38 ಶವಗಳನ್ನು ಹೊರತೆಗೆಯಲಾಗಿದೆ.

ಅಮೆರಿಕದ ಇತಿಹಾಸದ ಮಹಾ ದುರಂತಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ. ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಅಮೆರಿಕನ್ ಏರ್ ಲೈನ್ಸ್‌ಗೆ ಸೇರಿದ ವಿಮಾನಕ್ಕೆ ಯುಎಸ್‌ ಸೇನೆಯ ಬ್ಲ್ಯಾಕ್‌ ಹಾಕ್‌ ಹೆಲಿಕಾಪ್ಟರ್‌ ಡಿಕ್ಕಿ ಹೊಡೆದಿದ್ದು ದುರಂತ ಸಂಭವಿಸಿದೆ. ಹೆಲಿಕಾಪ್ಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿರುವ ವಾಷಿಂಗ್ಟನ್‌ನ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿ, ರಕ್ಷಣಾ ಕಾರ್ಯಾಚರಣೆಯಿಂದ ದೇಹಗಳನ್ನು ಹೊರತೆಗೆಯುವ ಹಂತಕ್ಕೆ ಬಂದಿದ್ದೇವೆ. ದುರ್ಘಟನೆಯಲ್ಲಿ ಯಾರೂ ಬದುಕುಳಿದಿಲ್ಲ ಎಂದು ನಾವು ನಂಬಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಯಾಣಿಕ ವಿಮಾನವು ಮೂರು ಭಾಗಗಳಾಗಿದೆ. ಹೆಲಿಕಾಪ್ಟರ್ ಅವಶೇಷಗಳು ಸಹ ಕಂಡುಬಂದಿವೆ. ಈವರೆಗೆ 38 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಉಳಿದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಮತ್ತು ಫೆಡರಲ್ ವಿಮಾನಯಾನ ಆಡಳಿತ (FAA) ದ ತನಿಖಾಧಿಕಾರಿಗಳು ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಗೆ ಕಾರಣ ತಿಳಿಯಲು ತನಿಖೆ ಮಾಡುತ್ತಿದ್ದಾರೆ.

ಕಾನ್ಸಾಸ್‌ನ ವಿಚಿಟಾದಿಂದ ಹೊರಟಿದ್ದ ಪ್ರಯಾಣಿಕ ಜೆಟ್ ಮತ್ತು ತರಬೇತಿ ವ್ಯಾಯಾಮದಲ್ಲಿ ತೊಡಗಿದ್ದ ಮಿಲಿಟರಿ ಹೆಲಿಕಾಪ್ಟರ್ ಬುಧವಾರ ರಾತ್ರಿ 9 ಗಂಟೆಯ ವೇಳೆಗೆ ಡಿಕ್ಕಿ ಹೊಡೆದಿದೆ ಎಂದು ಫೆಡರಲ್ ವಿಮಾನಯಾನ ಆಡಳಿತ ಮಾಹಿತಿ ಕೊಟ್ಟಿದೆ. ಶ್ವೇತಭವನದಿಂದ ಕೇವಲ ಮೂರು ಮೈಲಿ ದೂರದಲ್ಲಿ ಈ ಅಪಘಾತ ಸಂಭವಿಸಿದೆ.

Anushree at Maha Kumbh Mela ಮಹಾ ಕುಂಭಮೇಳದಲ್ಲಿ ತಮ್ಮೊಂದಿಗಿದ್ದ ನಟನನ್ನು ಮದುವೆಯಾಗ್ತಾರಾ ನಿರೂಪಕಿ ಅನುಶ್ರೀ?

Aamir Khan: ರಸ್ತೆಯಲ್ಲಿ ಆದಿ ಮಾನವನಂತೆ ಓಡಾಡ್ತಿರುವ ಈ ನಟ ಯಾರು.?

heavy rains: ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Pushpa 2 Reloaded 275 ಕೋಟಿಗೆ ಮಾರಾಟವಾದ ಪುಷ್ಪ 2 ರೀಲೋಡೆಡ್‌?

TAGGED:Aircraft tragedy: All 67 deaths and tragedies are still a mystery
Share This Article
Facebook Twitter Copy Link Print
Previous Article Anushree at Maha Kumbh Mela ಮಹಾ ಕುಂಭಮೇಳದಲ್ಲಿ ತಮ್ಮೊಂದಿಗಿದ್ದ ನಟನನ್ನು ಮದುವೆಯಾಗ್ತಾರಾ ನಿರೂಪಕಿ ಅನುಶ್ರೀ?
Next Article Drugs tablet ಮಾದಕ ಮಾತ್ರೆ ಟೈಡಾಲ್ ಅಕ್ರಮ ಮಾರಾಟ: 7 ಆರೋಪಿಗಳ ಬಂಧನ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?