Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Yatnal ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Yatnal ಯತ್ನಾಳ್ ವಿರುದ್ಧದ ದ್ವೇಷ ಭಾಷಣ ಪ್ರಕರಣ ರದ್ದು: ಹೈಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

ಯತ್ನಾಳ್ ಅವರು ಪ್ರಕರಣ ರದ್ದು ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಪಿ. ವೆಂಕಟೇಶ್ ದಳವಾಯಿ ಅವರು, ಅರ್ಜಿದಾರರ ಭಾಷಣದಲ್ಲಿ ಜಾತಿ ಧರ್ಮಗಳ ನಡುವೆ ದ್ವೇಷ ಬಿತ್ತುವ ಯಾವುದೇ ಉದ್ದೇಶವಿಲ್ಲ. ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಪ್ರಕರಣ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.

2023ರ ಅಕ್ಟೋಬರ್ 7ರಂದು ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದ ಯತ್ನಾಳ್ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬೆಳಗಾವಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿದೆ. ಅವರೆಲ್ಲರೂ ಸರ್ಕಾರದ ಮೊಮ್ಮಕ್ಕಳು, ನಮ್ಮದು ಸಂಸ್ಕೃತಿ ಬಿಂಬಿಸುವ ದೇಶ. ನಮ್ಮ ಗಣಪನ ಮೆರವಣಿಗೆ ಅವರ ಓಣಿಯಲ್ಲಿ ಹೋದರೆ ಉರಿಯುತ್ತದೆ. ಆ ಮಕ್ಕಳು ನಮ್ಮ ದೇಶದ ಅನ್ನ ತಿಂದು ಪಾಕಿಸ್ತಾನ ಪರವಾಗಿ ಜೈಕಾರ ಹಾಕುತ್ತಿದ್ದಾರೆ ಎಂದು ಭಾಷಣ ಮಾಡಿದ್ದರು.

ಸೌಹಾರ್ದತೆಗೆ ಧಕ್ಕೆ ತರುವ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕಾರ್ಯಕ್ಕೆ ಯತ್ನಾಳ್ ಮುಂದಾಗಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

TAGGED:Hate speech case against Yatnal quashed: High Court order
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ದ್ವಿತೀಯ, 31-01-2025, ಶುಕ್ರವಾರ
Next Article Harassment ಕ್ಯಾಬ್ ಬುಕ್ ಮಾಡಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?