newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಹ ಬ್ರಾಡ್ಬ್ಯಾಂಡ್ ಸಂಪರ್ಕ ನೀಡಲಾಗುವುದು. ಎಸ್ಸಿ ಮತ್ತು ಎಸ್ಟಿ ಸಮುದಾಯದ ಮಹಿಳೆಯರಿಗೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ ನೀಡಲು ಹೊಸ ಯೋಜನೆ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಇದರಿಂದ 5 ಲಕ್ಷ ಮಹಿಳೆಯರಿಗೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.
https://www.youtube.com/live/LFQODkdPLAo?si=vAt6HV4yNLPLDoY5