newsics.com
ಬೆಂಗಳೂರು : ಆಳಂದ ಕ್ಷೇತ್ರದ ಶಾಸಕರಾಗಿರುವ ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮ ಸಲ್ಲಿಸಿದ್ದಾರೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ (ನೀತಿ ಮತ್ತು ಕಾರ್ಯಕ್ರಮ) ಸ್ಥಾನಕ್ಕೆ ಆಳಂದ ಶಾಸಕರಾಗಿರುವ ಬಿ ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರ ಈ ನಡೆ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸಿದೆ.
ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ನಿರ್ಧಾರಕ್ಕೆ ಕಾರಣ ತಿಳಿದು ಬಂದಿಲ್ಲ.