newsics.com
ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಅವರ ಬಗ್ಗೆ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ನಟಿ ಸಾಯಿ ಪಲ್ಲವಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಬೆಡ್ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಾಯಿ ಪಲ್ಲವಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸಿನಿಮಾ ನಿರ್ದೇಶಕ ಚಂದೂ ಮೊಂಡೇಟಿ ಅವರೇ ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಯಿ ಪಲ್ಲವಿ ತೀವ್ರ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಯಿ ಪಲ್ಲವಿ ಅವರ ಆರೋಗ್ಯ ಸುಧಾರಿಸದಿದ್ದರೂ ಅವರು “ಥಂಡೇಲ್” ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸತತವಾಗಿ ಅವರು ಪ್ರಚಾರದಲ್ಲಿ ತೊಡಗಿದ್ದರಿಂದಲೂ ಅವರಿಗೆ ಮತ್ತಷ್ಟು ಆರೋಗ್ಯ ಸಮಸ್ಯೆ ಕಾಡಿದೆ.
ಸದ್ಯ ಸಾಯಿ ಪಲ್ಲವಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಕಾಲ ಸಂಪೂರ್ಣವಾಗಿ ಬೆಡ್ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರಂತೆ. ಇದೇ ಕಾರಣಕ್ಕೆ ಅನಾರೋಗ್ಯದ ಹಿನ್ನೆಲೆ ಮುಂಬೈನಲ್ಲಿ ನಡೆದ “ಥಂಡೇಲ್” ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಅವರಿಗೆ ಸಾಧ್ಯವಾಗಲಿಲ್ಲ.
ಅಕ್ಕಿನೇನಿ ನಾಗಚೈತನ್ಯ ಮತ್ತು ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ನಟಿಸಿರುವ ಚಿತ್ರ ತಾಂಡೇಲ್. ನಿರ್ದೇಶಕ ಚಂದು ಮೊಂಡೇಟಿ ನಿರ್ದೇಶನದ ಈ ಚಿತ್ರವು ಸಾಕಷ್ಟು ಸಂಚಲನ ಸೃಷ್ಟಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಮತ್ತು ಟೀಸರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದರೆ, ಹಾಡುಗಳು ಪ್ರಸ್ತುತ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ನಲ್ಲಿವೆ. ಈ ಚಿತ್ರ ಫೆಬ್ರವರಿ 7 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
S