newsics.com
ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್ (52) ಅಪಾರ್ಟ್ಮೆಂಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಕೊತ್ತನೂರು ಬಳಿ ಈ ದುರ್ಘಟನೆ ಸಂಭವಿಸಿದೆ. ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರವಾಗಿ ಟೆಸ್ಟ್ ಪಂದ್ಯ ಆಡಿದ್ದರು. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳುತ್ತಿದ್ದ ಡೇವಿಡ್ ಜಾನ್ಸನ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಕೊತ್ತನೂರು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಳಗ್ಗೆ ಮಹಡಿಗೆ ಹೋಗಲೇಬೇಕೆಂದು ಹಠ ಹಿಡಿದು ತೆರಳಿದ್ದ ಜಾನ್ಸನ್ ಮೇಲೆ ನಿಗಾ ವಹಿಸುವಂತೆ ಕಾವಲುಗಾರನಿಗೆ ಜಾನ್ಸನ್ ಪತ್ನಿ ಸೂಚಿಸಿದ್ದರು. ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಂದಿದ್ದರು. ಸರಿಯಾಗಿ ನಡೆಯಲೂ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ದೈಹಿಕವಾಗಿಯೂ ಸಾಕಷ್ಟು ಬಳಲಿದ್ದರು. ನಿಜವಾಗಿ ಏನಾಗಿದೆ ಎಂಬುದು ನಮಗೆ ಗೊತ್ತಿಲ್ಲ ಎಂದು ಜಾನ್ಸನ್ ಆಪ್ತ ಸ್ನೇಹಿತ ತಿಳಿಸಿದ್ದಾರೆ.