newsics.com
ಮಂಡ್ಯ: ವಿಸಿ ನಾಲೆಗೆ ಕಾರು ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯದ ತಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಓರ್ವನ ಶವ ಮೇಲಕ್ಕೆತ್ತಲಾಗಿದ್ದು,ಇಬ್ಬರ ಶವಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ನಾಲೆಯಲ್ಲಿ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದೆ. ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಿವಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.