newsics.com
ಬೆಂಗಳೂರು: ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ.
ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ.
ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ರೈತರೊಬ್ಬರು ಆತ್ಮಹತ್ಯೆ ಹಾದಿ ತುಳಿದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದ ರೈತ ಕೆ.ಡಿ.ರವಿ(50) ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ನಿವಾಸಿ ಪಾಂಡುರಂಗಯ್ಯನ ಮೃತದೇಹ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಸಂಬಂಧಿಕರ ಮನೆಗೆ ಹೋಗುವುದಾಗಿ ಶನಿವಾರ ಹೆಂಡತಿಗೆ ಹೇಳಿ ಮನೆಯಿಂದ ಹೋಗಿದ್ದ. ಆದ್ರೆ, ಇದೀಗ ಪಾಂಡುರಂಗಯ್ಯ ಶವವಾಗಿ ಪತ್ತೆಯಾಗಿದೆ.
ಮೈಕ್ರೋ ಫೈನಾನ್ಸ್ ಸಾಲಭಾದೆಯಿಂದ ಮನನೊಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಗಸಂದ್ರ-ಇಡಗೂರು ಗ್ರಾಮದ ಬಳಿ ನಡೆದಿದೆ. ಎಚ್ ನಾಗಸಂದ್ರ ಗ್ರಾಮದ ನಿವಾಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ನರಸಿಂಹಯ್ಯ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ನರಸಿಂಹಯ್ಯ, ಎರಡು ಮೂರು ಬಾರಿ ಆಟೋ ಸಹ ಒತ್ತೆ ಒಟ್ಟು ಹಣ ಕಟ್ಟಿದ್ದ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಬೀಚನಹಾನಹಳ್ಳಿ ಗ್ರಾಮದಲ್ಲೂ ಸಹ ಮೈಕ್ರೋಫೈನಾನ್ಸ್ ಸೇರಿದಂತೆ ವಿವಿಧ ಕಡೆ ಟ್ರ್ಯಾಕ್ಟರ್, ಬೈಕ್ ಹಾಗೂ ಮೊಬೈಲ್ ಗೆ ಸಾಲ ಮಾಡಿಕೊಂಡಿದ್ದ 26 ವರ್ಷದ ಗಿರೀಶ್ ಎಂಬಾತ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ನಡೆದಿದೆ.
ಒಂದು ವಿಚಾರಕ್ಕೆ ಮನನೊಂದು ಸಾಯಲು ತವಕಿಸಿ, ಕೊನೆಗೆ ಆತ್ಮಹತ್ಯೆ ಎನ್ನುವ ಕೆಟ್ಟ ಮಾರ್ಗಗಳನ್ನು ಹುಡುಕುತ್ತಾರೆ. ಮನಸ್ಸು ತುಂಬಾ ಸೂಕ್ಷ್ಮವಾದುದು.